ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸಿ–ಎಸ್ಟಿ ಉಪ ವರ್ಗೀಕರಣ: ತೀರ್ಪು ಮರುಪರಿಶೀಲನೆ ಅಗತ್ಯ- ಸುಪ್ರೀಂ

Last Updated 27 ಆಗಸ್ಟ್ 2020, 10:58 IST
ಅಕ್ಷರ ಗಾತ್ರ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣವನ್ನು ಮತ್ತಷ್ಟು ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎನ್ನುವ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ 2004ರಲ್ಲಿ ಸಂವಿಧಾನ ಪೀಠವು ಈ ಬಗ್ಗೆ ತೀರ್ಪು ನೀಡಿತ್ತು.

ಆದರೆ, ಈ ವಿಷಯದ ಬಗ್ಗೆ ಸರಿಯಾದ ನಿರ್ಧಾರ ಕೈಗೊಂಡಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪವರ್ಗೀಕರಣವನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳು ಕಾನೂನು ರೂಪಿಸಿಕೊಳ್ಳಬಹುದು. ಹೀಗಾಗಿ, ಮುಂದಿನ ನಿರ್ದೇಶನಕ್ಕಾಗಿ ಮರುಪರಿಶೀಲಿಸಲು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಈ ವಿಷಯವನ್ನು ಮಂಡಿಸುವಂತೆ ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ಅರುಣ ಮಿಶ್ರಾನೇತೃತ್ವದ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಇಂದಿರಾ ಬ್ಯಾನರ್ಜಿ, ವಿನೀತ್‌ ಶರಣ್‌, ಎಂ.ಆರ್‌. ಶಾ ಮತ್ತು ಅನಿರುದ್ಧ ಬೋಸ್‌ ಅವರು ಪೀಠದಲ್ಲಿನ ಇತರ ನ್ಯಾಯಮೂರ್ತಿಗಳು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣಗೊಳಿಸಲು ಸರ್ಕಾರಕ್ಕೆ ಅಧಿಕಾರ ನೀಡುವ ಕಾನೂನನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಂಜಾಬ್‌ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT