ಸೋಮವಾರ, ನವೆಂಬರ್ 30, 2020
25 °C

ಸಿಬಿಐ ತನಿಖೆಗೆ ರಾಜ್ಯಗಳ ಒಪ್ಪಿಗೆ ಕಡ್ಡಾಯ: ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ರಾಜ್ಯಗಳ ವ್ಯಾಪ್ತಿಯಲ್ಲಿ ತನಿಖೆ ನಡೆಸಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಸ್ಪಷ್ಟವಾಗಿ ಹೇಳಿದೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಈ ನಿಯಮವು ದೇಶದ ಒಕ್ಕೂಟ ವ್ಯವಸ್ಥೆಗೆ ಅನುಗುಣವಾಗಿದೆ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಬಿ. ಆರ್.ಗವಾಯಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಶೇಷ ಪೊಲೀಸ್‌ ಪಡೆಯ ಅಧಿಕಾರ ಮತ್ತು ಅಧಿಕಾರ ವ್ಯಾಪ್ತಿಯನ್ನು ಇತರ ಪ್ರದೇಶಗಳಿಗೂ ವಿಸ್ತರಿಸುವ ಹಾಗೂ ಈ ಅಧಿಕಾರ ಚಲಾವಣೆಗೆ ರಾಜ್ಯ ಸರ್ಕಾರಗಳ ಅನುಮತಿಗೆ ಸಂಬಂಧಿಸಿದ ನಿಯಮಗಳು ಈ ಸೆಕ್ಷನ್‌ಗಳಲ್ಲಿ ಇವೆ.

ಕೇಂದ್ರಾಡಳಿತ ಪ್ರದೇಶದಿಂದ ಡಿಎಸ್‌ಪಿಇಯ ಅಧಿಕಾರ ಮತ್ತು ಅಧಿಕಾರ ವ್ಯಾಪ್ತಿಯನ್ನು ರಾಜ್ಯಗಳಿಗೆ ವಿಸ್ತರಿಸಲು ಸೆಕ್ಷನ್‌ 5 ಕೇಂದ್ರಕ್ಕೆ ಅವಕಾಶ ಒದಗಿಸುತ್ತದೆ. ಆದರೆ, ಇಂತಹ ವಿಸ್ತರಣೆಗೆ ರಾಜ್ಯದ ಅನುಮತಿ ಕಡ್ಡಾಯ ಎಂಬುದನ್ನು ಸೆಕ್ಷನ್‌ 6 ಸ್ಪಷ್ಟಪಡಿಸುತ್ತದೆ ಎಂದು ಪೀಠವು ಹೇಳಿದೆ. ರಾಜ್ಯ ಸರ್ಕಾರಗಳಿಂದ ಪೂರ್ವಾನುಮತಿ ಪಡೆಯದೇ ಸಿಬಿಐ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿ, ಭ್ರಷ್ಟಾಚಾರ ಪ್ರಕ
ರಣದ ಆರೋಪ ಹೊತ್ತಿರುವ ಕೆಲವು ಸರ್ಕಾರಿ ಅಧಿಕಾರಿಗಳು ಹಾಗೂ ಇನ್ನಿತರರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

ಪಂಜಾಬ್, ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಛತ್ತೀಸಗಡ ರಾಜ್ಯಗಳು ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಇತ್ತೀಚೆಗೆ ಹಿಂದಕ್ಕೆ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.