ಸೋಮವಾರ, ನವೆಂಬರ್ 30, 2020
19 °C

ರೆಮ್ಡೆಸಿವಿರ್‌, ಫೆವಿಪಿರವಿರ್‌ ಔಷಧ ಬಳಕೆ:ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರೆಮ್ಡೆಸಿವಿರ್‌ ಮತ್ತು ಫೆವಿಪಿರವಿರ್‌ ಔಷಧಗಳನ್ನು ಯಾವುದೇ ಅನುಮತಿ ಇಲ್ಲದೇ ಕೋವಿಡ್‌ 19 ಸಾಂಕ್ರಾಮಿಕ ರೋಗದ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರವನ್ನು ಕೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ನ್ಯಾಯಪೀಠ,  ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿ, ನಾಲ್ಕು ವಾರಗಳೊಳಗೆ ನೋಟಿಸ್‌ಗೆ ಉತ್ತರಿಸುವಂತೆ ತಿಳಿಸಿದೆ.

ಈ ಪ್ರಕರಣದ ಅರ್ಜಿದಾರ ಹಾಗೂ ವಕೀಲ ಎಂ.ಎಲ್‌.ಶರ್ಮಾ, ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್‌ ಅವರನ್ನೊಳಗೊಂಡು, ಅ.15ರ ವಿಶ್ವ ಆರೋಗ್ಯ ಸಂಸ್ಥೆ ವರದಿಯನ್ನು ಉಲ್ಲೇಖಿಸಿ, ’ಈ ಎರಡು ಔಷಧಗಳನ್ನು  ಕೋವಿಡ್‌ 19 ಚಿಕಿತ್ಸೆಗೆ ಬಳಸಬಹುದೆಂದು ಎಲ್ಲಿಯೂ ಅಧಿಕೃತವಾಗಿ ಹೇಳಿಲ್ಲ‘ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

’ಈ ಎರಡು ಔಷಧಗಳನ್ನು ಕೋವಿಡ್‌ 19 ಚಿಕಿತ್ಸೆಗೆ ಬಳಸುವ ಕುರಿತು ಎಲ್ಲೂ ಅಧಿಕೃತ ಮಾಹಿತಿ ಇಲ್ಲ ಎಂಬ ವಿಚಾರ ಕೇಂದ್ರ ಸರ್ಕಾರಕ್ಕೆ ತಿಳಿಸುವ ಸಂಬಂಧ, ನೋಟಿಸ್‌ ನೀಡಲಾಗಿದೆ‘ ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು