ಸೋಮವಾರ, ಜೂನ್ 27, 2022
21 °C

ಕೋವಿಡ್‌: ಅನಾಥ ಮಕ್ಕಳ ಕುರಿತು ಕೇಂದ್ರದ ಮಾಹಿತಿ ಕೇಳಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್–19 ಸಾಂಕ್ರಾಮಿಕ ರೋಗದಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಪರಿಹಾರ ನೀಡುವ ಕುರಿತು ಕೇಂದ್ರದ ಕಲ್ಯಾಣ ಯೋಜನೆಯನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಈ ಯೋಜನೆಯ ಮೇಲ್ವಿಚಾರಣೆಗಾಗಿ ರೂಪಿಸಿದ ಕಾರ್ಯವಿಧಾನದ ವಿವರಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾರ್ಯದರ್ಶಿ ಅಥವಾ ಜಂಟಿ ಕಾರ್ಯದರ್ಶಿ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲು ನಿರ್ದೇಶನ ನೀಡಿದೆ.

ಈ ನೋಡಲ್ ಅಧಿಕಾರಿಗಳು ಅನಾಥ ಮಕ್ಕಳು ಮತ್ತು ಅವರ ಕಲ್ಯಾಣ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಆ್ಯಮಿಕಸ್ ಕ್ಯೂರಿ ಗೌರವ್ ಅಗರ್‌ವಾಲ್ ಅವರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದೂ ಕೋರ್ಟ್ ತಿಳಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಮೊದಲು ತೆಲಂಗಾಣ, ತಮಿಳುನಾಡು, ಕೇರಳ, ಕರ್ನಾಟಕ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಜಾರ್ಖಂಡ್ ಒಟ್ಟು ಹತ್ತು ರಾಜ್ಯಗಳ ಪ್ರಕರಣಗಳನ್ನು ಸೋಮವಾರ ಆಲಿಸುವುದಾಗಿಯೂ ನ್ಯಾಯಪೀಠವು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು