ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಮುಖ್ಯಸ್ಥರ ಅಧಿಕಾರವಧಿ ವಿಸ್ತರಣೆ: ಕೇಂದ್ರ, ಸಿವಿಸಿಗೆ ‘ಸುಪ್ರೀಂ’ ನೋಟಿಸ್‌

Last Updated 2 ಆಗಸ್ಟ್ 2022, 11:19 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯದ ಮುಖ್ಯಸ್ಥರ ಅಧಿಕಾರವಧಿ ವಿಸ್ತರಣೆಯನ್ನು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಾಗೃತ ಆಯೋಗಕ್ಕೆ (ಸಿವಿಸಿ) ಸೂಚಿಸಿದೆ.

ಅಧಿಕಾರವಧಿಯ ವಿಸ್ತರಣೆ ಮತ್ತು ಐದು ವರ್ಷದವರೆಗೂ ಅವಧಿ ವಿಸ್ತರಿಸುವುದಕ್ಕೆ ಪೂರಕವಾಗಿ ಕಾಯ್ದೆಗೆ ತಿದ್ದುಪಡಿ ತಂದಿದ್ದನ್ನು ಪ್ರಶ್ನಿಸಿ ಎಂಟು ವಿವಿಧ ಅರ್ಜಿಗಳು ಸಲ್ಲಿಕೆಯಾಗಿದ್ದವು.ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು ಈ ಕುರಿತು ನೋಟಿಸ್‌ ನೀಡಲು ಆದೇಶಿಸಿತು.

ಕಾಂಗ್ರೆಸ್‌ ನಾಯಕರಾದ ರಣದೀಪ್‌ ಸಿಂಗ್ ಸುರ್ಜೆವಾಲಾ, ಜಯಾ ಠಾಕೂರ್‌, ಟಿಎಂಸಿ ನಾಯಕ ಸಾಕೇತ್ ಗೋಖಲೆ ಮತ್ತು ವಕೀಲ ಎಂ.ಎಲ್‌. ಶರ್ಮಾ ಅವರು ಈ ಕುರಿತು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT