ಶನಿವಾರ, ಏಪ್ರಿಲ್ 1, 2023
29 °C

ಪಟಾಕಿ ನಿಷೇಧ ಮಾಡುವ ಕಲ್ಕತ್ತ ಹೈಕೋರ್ಟ್ ಅದೇಶ ರದ್ದುಗೊಳಿಸಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ ವಾಯುಮಾಲಿನ್ಯವನ್ನು ಪರಿಶೀಲಿಸಲು ಈ ವರ್ಷ ಕಾಳಿ ಪೂಜೆ, ದೀಪಾವಳಿ ಮತ್ತು ಇತರ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳನ್ನು ನಿಷೇಧಿಸುವ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ಅಜಯ್ ರಸ್ತೋಗಿ ಅವರನ್ನೊಳಗೊಂಡ ವಿಶೇಷ ನ್ಯಾಯಪೀಠವು, ರಾಜ್ಯದಲ್ಲಿ ನಿಷೇಧಿತ ಪಟಾಕಿಗಳು ಮತ್ತು ಸಂಬಂಧಿತ ವಸ್ತುಗಳನ್ನು ಆಮದು ಮಾಡಿಕೊಳ್ಳುವುದಿಲ್ಲ ಎನ್ನುವ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರವು ಖಾತ್ರಿ ಪಡಿಸಿಕೊಳ್ಳುವ ಕುರಿತು ಗಮನ ಹರಿಸಬೇಕು ಎಂದು ಹೇಳಿದೆ.

ದೀಪಾವಳಿ ವಿಷಯದ ವಿಚಾರಣೆಗೆ ಸಭೆ ಸೇರಿದ ಪೀಠ, ರಾಜ್ಯದಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟ, ಬಳಕೆ ಮತ್ತು ಖರೀದಿಯನ್ನು ನಿಷೇಧಿಸಿ ಅ. 29ರಂದು ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿತು.

‘ಈ ವರ್ಷ ಕಾಳಿ ಪೂಜೆ, ದೀಪಾವಳಿ ಆಚರಣೆ ಮತ್ತು ಛತ್ ಪೂಜೆ, ಜಗದ್ಧಾತ್ರಿ ಪೂಜೆ, ಗುರುನಾನಕ್ ಅವರ ಜನ್ಮದಿನ ಮತ್ತು ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮುನ್ನಾದಿನದ ಆಚರಣೆಗಳಲ್ಲಿ ಯಾವುದೇ ರೀತಿಯ ಪಟಾಕಿಗಳ ಬಳಕೆ ಅಥವಾ ಪ್ರದರ್ಶನ ಅಥವಾ ಪಟಾಕಿಗಳನ್ನು ಸಿಡಿಸದಂತೆ ರಾಜ್ಯವು ಖಚಿತಪಡಿಸಿಕೊಳ್ಳಬೇಕು’ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿತ್ತು.

ಈ ಸಂದರ್ಭಗಳಲ್ಲಿ ಮೇಣ ಅಥವಾ ಎಣ್ಣೆ ಆಧರಿತ ದೀಪಗಳನ್ನು ಮಾತ್ರ ಬಳಸುವಂತೆಯೂ ಹೈಕೋರ್ಟ್ ತನ್ನ ಆದೇಶದಲ್ಲಿ ಸೂಚಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು