ನವದೆಹಲಿ:ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಶಾಸಕ ಆಜಂಖಾನ್ ಅವರ ಮೇಲೆ ಅಲಹಾಬಾದ್ ಹೈಕೋರ್ಟ್ ವಿಧಿಸಿರುವ ಜಾಮೀನು ನಿಬಂಧನೆಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ.

ಈ ಮೂಲಕ ಆಜಂಖಾನ್‌ಒತ್ತುವರಿ ಮಾಡಿದ್ದಾರೆ ಎನ್ನಲಾದಜೌಹಾರ್ ವಿಶ್ವವಿದ್ಯಾಲಯದ ಭೂಮಿಯನ್ನು ವಶಕ್ಕೆ ಪಡೆಯುವಂತೆ ರಾಂಪುರ ಜಿಲ್ಲಾ ನ್ಯಾಯಾಲಯಕ್ಕೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಬೇಲಾ ಎಂ.ತ್ರಿವೇದಿ ನೇತೃತ್ವದ ರಜೆ ಕಾಲದ ಪೀಠವು, ‘ಮೇಲ್ನೋಟಕ್ಕೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ವಿಧಿಸಿರುವ ಷರತ್ತುಗಳು ಅಸಮಂಜಸವಾಗಿವೆ. ಆರೋಪಿಯ ಉಪಸ್ಥಿತಿ ಮತ್ತು ವಿಚಾರಣೆಯ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ವಿಧಿಸಬೇಕಾದ ಷರತ್ತುಗಳೊಂದಿಗೆ ಸಮಂಜಸ ಸಂಬಂಧವನ್ನು ಹೊಂದಿಲ್ಲ. ಇದು ಸಿವಿಲ್ ನ್ಯಾಯಾಲಯದ ತೀರ್ಪಿನಂತೆ ಧ್ವನಿಸುತ್ತಿದೆ’ ಎಂದು ಚಾಟಿ ಬೀಸಿದೆ.

ಮೇ 10ರಂದು ಅಲಹಾಬಾದ್ ಹೈಕೋರ್ಟ್ ಆಜಂಖಾನ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.