ಬುಧವಾರ, ಫೆಬ್ರವರಿ 1, 2023
16 °C
ಒಬಿಸಿಗಳಿಗೆ ಮೀಸಲಾತಿ ಇಲ್ಲದೆಯೇ ಚುನಾವಣೆ ನಡೆಸಲು ಆದೇಶಿಸಿದ್ದ ಹೈಕೋರ್ಟ್‌

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕಲ್ಪಿಸದೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ಬುಧವಾರ ತಡೆ ನೀಡಿದೆ.

ಒಬಿಸಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಹಿಂದುಳಿದ ವರ್ಗಗಳ ಆಯೋಗವು ಮಾರ್ಚ್‌ 31ರ ಒಳಗಾಗಿ ನಿರ್ಧಾರ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಅವರಿದ್ದ ನ್ಯಾಯಪೀಠ, ಒಬಿಸಿಗಳಿಗೆ ಮೀಸಲಾತಿ ಇಲ್ಲದೆಯೇ ಚುನಾವಣೆ ನಡೆಸಿದಲ್ಲಿ ಸಮಾಜದ ಒಂದು ವರ್ಗ ಪ್ರಾತಿನಿಧ್ಯದಿಂದ ವಂಚಿತವಾಗುವುದು ಎಂದು ಅಭಿಪ್ರಾಯಪಟ್ಟಿತು.

‘ಆಡಳಿತದ ವಿಷಯದಲ್ಲಿ ನಿರ್ವಾತ ಸೃಷ್ಟಿಯಾಗಲು ಅವಕಾಶ ನೀಡಬಾರದು. ಹೀಗಾಗಿ, ಅವಧಿ ಮುಗಿದಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಹುದು. ಆದರೆ, ಆಡಳಿತಾಧಿಕಾರಿಗಳು ನೀತಿಗೆ ಸಂಬಂಧಿಸಿ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು