ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಲಾಕ್‌ಡೌನ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

Last Updated 20 ಏಪ್ರಿಲ್ 2021, 8:58 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಐದು ನಗರಗಳಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್‌ಡೌನ್ ಮಾಡಬೇಕೆಂಬ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅಧ್ಯಕ್ಷತೆ ವಹಿಸಿದ್ದ ಪೀಠ, ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ಒಡ್ಡಿದೆ.

ಅಲಹಾಬಾದ್ ಹೈಕೋರ್ಟ್ ಸೋಮವಾರ ಸಂಜೆ ಆದೇಶ ಹೊರಡಿಸಿದ್ದು, ಐದು ನಗರಗಳಲ್ಲಿ ಸರ್ಕಾರ ಸಂಪೂರ್ಣ ಲಾಕ್‌ಡೌನ್ ಮಾಡಬೇಕು ಎಂದು ಸೂಚಿಸಿತ್ತು. ಆದರೆ ಉತ್ತರ ಪ್ರದೇಶ ಸರ್ಕಾರ ಅದನ್ನು ನಿರಾಕರಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಉತ್ತರ ಪ್ರದೇಶ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದ್ದು, ಸಂಪೂರ್ಣ ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವುದನ್ನು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜತೆಗೆ ಕೋವಿಡ್ ಸೋಂಕಯ ಹರಡುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್, ಲಖ್ನೋ, ವಾರಾಣಸಿ, ಕಾನ್ಪುರ್ ಮತ್ತು ಗೋರಖ್‌ಪುರದಲ್ಲಿ ಸಂಪೂರ್ಣ ಲಾ‌ಕ್‌ಡೌನ್ ಮಾಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT