ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ನಾಯಿಗೆ ಆಹಾರ: ಬಾಂಬೆ ಹೈಕೋರ್ಟ್‌ ಆದೇಶ ವಜಾಗೊಳಿಸಿದ ಸುಪ್ರೀಂ ಕೋರ್ಟ್

Last Updated 16 ನವೆಂಬರ್ 2022, 12:26 IST
ಅಕ್ಷರ ಗಾತ್ರ

ನವದೆಹಲಿ: ಬೀದಿ ನಾಯಿಗಳಿಗೆ ಆಹಾರ ನೀಡುವವರು ಕಡ್ಡಾಯವಾಗಿ ಅವುಗಳನ್ನು ದತ್ತು ತೆಗೆದುಕೊಳ್ಳಬೇಕು ಅಥವಾ ನಾಯಿಗಳ ಆಶ್ರಯ ಮನೆಯಲ್ಲಿ ಅವುಗಳನ್ನು ಇಟ್ಟು ಖರ್ಚು ಭರಿಸಬೇಕು ಎಂದು ಬಾಂಬೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಇದೇ ವೇಳೆ, ಸಾರ್ವಜನಿಕರು ಬೀದಿ ನಾಯಿಗಳಿಗೆ ಆಹಾರ ನೀಡಲು ನಿರ್ದಿಷ್ಟ ಸ್ಥಳವನ್ನು ನಿಗದಿಪಡಿಸಬೇಕು ಎಂದು ನಾಗ್ಪುರ ಪಾಲಿಕೆಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ‘ನಾಯಿಗಳಿಗೆ ಆಹಾರ ನೀಡುವವರು ಕಡ್ಡಾಯವಾಗಿ ಅವುಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಹೇಳಲು ಸಾಧ್ಯವಿಲ್ಲ. ಮುಂದಿನ ವಿಚಾರಣೆವರೆಗೂ ಬೀದಿ ನಾಯಿಗಳಿಗೆ ಆಹಾರ ಹಾಕುವವರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವಂತಿಲ್ಲ.ಸಾರ್ವಜನಿಕರು ಸಹ ನಾಯಿಗಳಿಗೆ ಆಹಾರ ನೀಡುವ ವೇಳೆ ಇತರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದೆ.

ಹಾಗೆಯೇ ಬಾಂಬೆ ಹೈಕೋರ್ಟ್‌ ಆದೇಶದ ಕುರಿತು ಪ್ರತಿಕ್ರಿಯೆ ನೀಡುವಂತೆ ನಾಗ್ಪುರ ಪಾಲಿಕೆ ಮತ್ತು ಭಾರತದ ಪ್ರಾಣಿಗಳ ಕಲ್ಯಾಣ ಮಂಡಳಿಯನ್ನು ಕೇಳಿದೆ.

ನಾಗ್ಪುರ ಮತ್ತು ಸುತ್ತಮುತ್ತಲಿನ ಸಾರ್ವಜನಿಕ ಪ್ರದೇಶದದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕುವವರು ಕಡ್ಡಾಯವಾಗಿ ಅವುಗಳನ್ನು ದತ್ತು ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರತಿ ತಪ್ಪಿಗೆ ₹200 ದಂಡವಿಧಿಸಬಹುದು ಎಂದು ಅ.20ರಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT