ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ರಮೇಶ್ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ‌ಪ್ರಕರಣದ ವಿಚಾರಣೆಗೆ ತಡೆ

Last Updated 26 ಅಕ್ಟೋಬರ್ 2020, 12:50 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕೇಂದ್ರ ಸಚಿವರ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಅವರಿದ್ದ ಪೀಠವುಸೋಮವಾರ ಈ ಸಂಬಂಧ ಆದೇಶ ನೀಡಿತು.

ಸರ್ಕಾರದ ವಸತಿ ಬಳಕೆಗಾಗಿ ಮಾಜಿ ಮುಖ್ಯಮಂತ್ರಿಗಳು ಬಾಡಿಗೆ ಪಾವತಿಗೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ ಕಳೆದ ವರ್ಷ ನೀಡಿದ್ದ ಆದೇಶವನ್ನು ಪಾಲಿಸಿಲ್ಲ ಎಂದು ನ್ಯಾಯಾಂಗ ನಿಂದನೆ ಮೊಕದ್ದಮೆ ವಿಚಾರಣೆಗೆ ಚಾಲನೆ ನೀಡಲಾಗಿತ್ತು. ‌

ಅಧಿಕಾರದಿಂದ ಕೆಳಗಿಳಿಂದ ನಂತರ ಸರ್ಕಾರಿ ವಸತಿ ಬಳಸಿದ ಪೂರ್ಣ ಅವಧಿಗೆ ಅನ್ವಯಿಸಿ ಮಾರುಕಟ್ಟೆ ದರದಲ್ಲಿ ಬಾಡಿಗೆ ಪಾವತಿಸಬೇಕು ಎಂದು ಉತ್ತರಾಖಂಡ ಹೈಕೋರ್ಟ್ ಕಳೆದ ವರ್ಷ ಮಾಜಿ ಮುಖ್ಯಮಂತ್ರಿಗಳಿಗೆ ಆದೇಶಿಸಿತ್ತು. ಡೆಹ್ರಾಡೂನ್‌ ಮೂಲದ ಸೇವಾ ಸಂಸ್ಥೆಯೊಂದು ಈ ಕುರಿತು ಅರ್ಜಿಯನ್ನು ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT