ಬುಧವಾರ, ಮೇ 18, 2022
25 °C

ಐ.ಟಿ ನಿಯಮ ಪ್ರಶ್ನಿಸಿದ್ದ ಅರ್ಜಿ: ಹೈಕೋರ್ಟ್‌ಗಳ ವಿಚಾರಣೆಗೆ ತಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ (ತಿದ್ದುಪಡಿ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಡಿಜಿಟಲ್‌ ಮಾಧ್ಯಮ ನೀತಿ ಸಂಹಿತೆ) ನಿಯಮಗಳನ್ನು ಪ್ರಶ್ನಿಸಿದ್ದ ಅರ್ಜಿಗಳ ಕುರಿತು ವಿವಿಧ ಹೈಕೋರ್ಟ್‌ಗಳಲ್ಲಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ದ್ವೇಷ ಭಾಷಣ ವಿಷಯ ಪ್ರಸ್ತಾಪಿಸಿದ್ದ ಹಾಗೂ ಒಟಿಟಿ ವೇದಿಕೆಯ ನಿಯಂತ್ರಣ ಕುರಿತಂತೆ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಎ.ಎಸ್‌.ಓಕಾ ಅವರಿದ್ದ ಪೀಠವು ಈ ಕುರಿತು ಆದೇಶವನ್ನು ನೀಡಿತು.

ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿ ವಿವಿಧ ಹೈಕೋರ್ಟ್‌ಗಳಲ್ಲಿರುವ ಅರ್ಜಿಗಳ ವಿಚಾರಣೆಗೆ ತಡೆಯಾಜ್ಞೆ ನೀಡಲಾಗುತ್ತಿದೆ. ಅಲ್ಲದೆ, ಈ ಪ್ರಕರಣದ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಲಾಗಿದೆ ಎಂದು ಪೀಠವು ತಿಳಿಸಿತು. 

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ತಾ, ‘ಸುಪ್ರೀಂ ಕೋರ್ಟ್‌ ಎದುರು ವಿವಿಧ ಅರ್ಜಿಗಳ ವಿಚಾರಣೆ ಬಾಕಿ ಇವೆ. ಶಾಸನಬದ್ಧ ನಿಯಮಗಳಿಗೆ ಕೆಲ ಹೈಕೋರ್ಟ್‌ಗಳು ತಡೆಯಾಜ್ಞೆ ನೀಡಿದ್ದು, ಕೇಂದ್ರ ಮೇಲ್ಮನವಿ ಸಲ್ಲಿಸಿದೆ ಎಂದು ತಿಳಿಸಿದರು.

‘ಹೈಕೋರ್ಟ್‌ಗಳಿಂದ ಈ ಸಂಬಂಧ ಇನ್ನಷ್ಟು ಆದೇಶಗಳು ಹೊರಬೀಳದಂತೆ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಹಾಗೂ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೇ ವರ್ಗಾಯಿಸಲು ಆದೇಶಿಸಬೇಕು’ ಎಂದು ಮೆಹ್ತಾ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಪೀಠವು, ಹೈಕೋರ್ಟ್‌ಗಳು ಈಗಾಗಲೇ ನೀಡಿರುವ ಮಧ್ಯಂತರ ಆದೇಶಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು