ಜಿಮ್ ಕಾರ್ಬೆಟ್ ಉದ್ಯಾನದಲ್ಲಿ ಖಾಸಗಿ ಬಸ್ ಸಂಚಾರ ಆದೇಶಕ್ಕೆ ‘ಸುಪ್ರೀಂ’ ತಡೆ

ನವದೆಹಲಿ: ಉತ್ತರಾಖಂಡದಲ್ಲಿ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದ ಹುಲಿ ಸಂರಕ್ಷಣಾ ಪ್ರದೇಶದ ವ್ಯಾಪ್ತಿಯಲ್ಲಿ ಬಸ್ಸುಗಳು ಮತ್ತು ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠವು ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಈ ಕುರಿತು ಅರ್ಜಿ ಸಲ್ಲಿಸಿದ್ದ ವಕೀಲ ಗೌರವ್ ಕುಮಾರ್ ಬನ್ಸಲ್, ಅವರು, ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ರಾಷ್ಟ್ರೀಯ ಉದ್ಯಾನ ಆಡಳಿತದ ನಿರ್ಧಾರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು.
ಈ ಆದೇಶ ಮೂಲಕ ಸಂಬಂಧಿತ ಅಧಿಕಾರಿಗಳು, ಖಾಸಗಿ ಬಸ್ಸುಗಳ ನಿರ್ವಹಣಾ ಸಂಸ್ಥೆಗಳಿಗೆ ಅನುಕೂಲಕರ ಆಗುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.