ನವದೆಹಲಿ: 198 ವಾರ್ಡ್ಗಳಿಗೆ ಅನ್ವಯಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ, ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಹಾಗೂ ಭಾಸ್ಕರ್ ಎಂಬುವರು ಮೂರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು ಇದರ ವಿಚಾರಣೆ ನಡೆಸಿತು.

ಎ.ಎಸ್.ಬೋಪಣ್ಣ ಮತ್ತು ವಿ.ಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ಈ ಸಂಬಂಧ ವಿವರಣೆ ನೀಡುವಂತೆ ರಾಜ್ಯ ಚುನಾವಣಾ ಆಯೋಗ (ಎಸ್ಇಸಿ), ಕಾಂಗ್ರೆಸ್ ಮುಖಂಡ ಎಂ.ಶಿವರಾಜು ಹಾಗೂ ಇತರರಿಗೆ ನೋಟಿಸ್ ನೀಡಿತು.

‘ಹೈಕೋರ್ಟ್ ಆದೇಶಕ್ಕೆ ತಡೆ ನೀಡಲಾಗಿದ್ದು, ಮುಂದಿನ ಆದೇಶದವರೆಗೂ ಇದನ್ನು ಪಾಲಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.

ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಾಗೂ ಇತರ ಅರ್ಜಿದಾರರಾದ ಭಾಸ್ಕರ್ ಮತ್ತು ದಲಿತ ಸಂಘರ್ಷ ಸಮಿತಿಯ ಪರ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಮತ್ತು ಸಿ.ಎ.ಸುಂದರಂ ಅವರು ವಾದ ಮಂಡಿಸಿದರು.

1976ರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಬಿಬಿಎಂಪಿ ಚುನಾವಣೆಯನ್ನು ಈ ಹಿಂದಿನ ಚುನಾಯಿತ ಕೌನ್ಸಿಲ್ ಅವಧಿ ಮುಗಿಯುವ ಮುನ್ನ (ಸೆ.10, 2020) ನಡೆಸಿರಲಿಲ್ಲ.

ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರಾದ ಎಂ.ಶಿವರಾಜು ಹಾಗೂ ಅಬ್ದುಲ್ ವಾಜಿದ್ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ವಿಭಾಗೀಯ ಪೀಠವು ವಾರ್ಡ್ವಾರು ಮೀಸಲಾತಿಯ ಅಂತಿಮ ಪಟ್ಟಿ ಪ್ರಕಟವಾದ ಆರು ವಾರಗಳ ಒಳಗೆ ಚುನಾವಣೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಸೆಪ್ಟೆಂಬರ್ 23, 2020ರ ಅಧಿಸೂಚನೆ ಆಧರಿಸಿ ಚುನಾವಣೆಗೆ ಆದೇಶಿಸಲಾಗಿತ್ತು. ಈ ಆದೇಶದ ಸಿಂಧುತ್ವವನ್ನು ರಾಜ್ಯ ಸರ್ಕಾರ ಹಾಗೂ ಇತರ ಅರ್ಜಿದಾರರು ಪ್ರಶ್ನಿಸಿದ್ದರು. ರಾಜ್ಯ ಸರ್ಕಾರವು ಇದೇ 10ರಂದು ಮೇಲ್ಮನವಿ ಸಲ್ಲಿಸಿತ್ತು.

‘ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ವಾರ್ಡ್ಗಳ ಸಂಖ್ಯೆಯನ್ನು ಕನಿಷ್ಠ 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಸರ್ಕಾರವು ಸಾಂವಿಧಾನಿಕವಾಗಿ ಜಾರಿಗೆ ತಂದ ಕಾನೂನು ತಿದ್ದುಪಡಿಯ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿಯಬೇಕಿತ್ತು. ಕಾನೂನು ತಿದ್ದುಪಡಿಯು ಸಂವಿಧಾನದ 243 (ಯು) ವಿಧಿಯ ಆಶಯಗಳಿಗೆ ವಿರುದ್ಧವಾಗಿಲ್ಲ’ ಎಂದು ಸರ್ಕಾರವು ಮೇಲ್ಮನವಿ ಅರ್ಜಿಯಲ್ಲಿ ಉಲ್ಲೇಖಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.