ನವದೆಹಲಿ: ಬೆಂಗಳೂರಿನಲ್ಲಿ 2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ನಜೀರ್ ಮದನಿ ಹಾಗೂ ಇತರ 20 ಆರೋಪಿಗಳ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದಹೇಮಂತ್ ಗುಪ್ತಾ ಮತ್ತು ವಿಕ್ರಂ ನಾಥ್ ಅವರಿದ್ದ ಪೀಠವು ಮುಂದಿನ ಆದೇಶದವರೆಗೂ ವಿಚಾರಣೆಯನ್ನು ರದ್ದುಮಾಡಿದೆ.

ತನಿಖೆ ವೇಳೆ ವಶಕ್ಕೆ ಪಡೆಯಲಾಗಿದ್ದ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಾಕ್ಷ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿತ್ತು. ಇದರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಸತ್ಯಾಸತ್ಯತೆ ಸಾಬೀತು ಮಾಡಲು ಸಾಕ್ಷಿಗಳನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡುವಂತೆ ಕೋರಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇರಳ ಡೆಮಾಕ್ರಟಿಕ್ ಪಕ್ಷದ ನಾಯಕ ಮದನಿ ಹಾಗೂ ಇತರ ಆರೋಪಿಗಳಿಗೆ ಪೀಠವು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.