ಸೋಮವಾರ, ಜೂನ್ 21, 2021
24 °C

ಶ್ರದ್ಧಾಂಜಲಿ: ಸುಪ್ರೀಂಕೋರ್ಟ್‌ ಕಲಾಪ ಸ್ಥಗಿತ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ ಶನಿವಾರ ನಿಧನರಾದ ನ್ಯಾಯಮೂರ್ತಿ ಎಂ ಎಂ ಶಾಂತಾನಗೌಡರ ಅವರ ಗೌರವಾರ್ಥ ಸೋಮವಾರ ಸುಪ್ರೀಂ ಕೋರ್ಟ್‌ ಆವರಣದಲ್ಲಿ ಸಂತಾಪ ಸೂಚಕ ಸಭೆ ನಡೆಸಿ, ನಂತರ ದಿನದ ಕಲಾಪವನ್ನು ಸ್ಥಗಿತಗೊಳಿಸಲಾಯಿತು.

ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿರುವ ಎನ್‌.ವಿ.ರಮಣ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌ ಆವರಣದಲ್ಲಿ ಸಂತಾಪ ಸೂಚಕ ಸಭೆ ನಡೆಯಿತು. ನ್ಯಾಯಾಲಯದ ವಿವಿಧ ಪೀಠಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದ್ದ ಏಳು ನ್ಯಾಯಾಧೀಶರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಾಂತನಗೌಡರ ಅವರ ಹಠಾತ್ ನಿಧನದಿಂದ ತೀವ್ರ ನೋವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ್ ಅವರು ಹೇಳಿದರು. ನಂತರ ಎರಡು ನಿಮಿಷಗಳ ಮೌನ ಆಚರಿಸುವ ಮೂಲಕ ಅಗಲಿದ ನ್ಯಾಯಮೂರ್ತಿಯವರಿಗೆ ಗೌರವ ಸಲ್ಲಿಸಲಾಯಿತು.

ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಯು.ಯು.ಲಲಿತ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್, ಎಲ್ ನಾಗೇಶ್ವರ ರಾವ್, ಎಸ್ ರವೀಂದ್ರ ಭಟ್ ಮತ್ತು ಹೃಷ್ಕೇಶ್ ರಾಯ್ ಕೂಡ ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಅಧ್ಯಕ್ಷ ವಿಕಾಸ್ ಸಿಂಗ್ ಮತ್ತು ವಕೀಲ ಶಿವಾಜಿ ಜಾಧವ್ ಅವರು ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು