ನವದೆಹಲಿ:ಕೇರಳದ ಕೆಲ ಪ್ರದೇಶಗಳಲ್ಲಿಕೋವಿಡ್ ದೃಢಪ್ರಮಾಣ ಈಗಲೂ ಹೆಚ್ಚಿದೆ. ಹೀಗಿದ್ದರೂ, ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ನಿರ್ಬಂಧಗಳ ಸಡಿಲಿಕೆಯಿಂದಾಗಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸುಪ್ರೀಂಕೋರ್ಟ್ ಎಚ್ಚರಿಸಿದೆ.

ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, ‘ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೋವಿಡ್ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿತು.

ಇದನ್ನೂ ಓದಿ:ಕೋವಿಡ್ ನಿಯಮ ಸಡಿಲಿಕೆ ವಿರುದ್ಧ ಅರ್ಜಿ; ಪ್ರತಿಕ್ರಿಯೆಗೆ ಕೇರಳ ಸರ್ಕಾರಕ್ಕೆ ಸೂಚನೆ

‘ಸಂವಿಧಾನದ 21ನೇ ವಿಧಿ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಕೇರಳ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.