ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷೇಧಿತ ಸಂಘಟನೆ ಸದಸ್ಯತ್ವ ಹೊಂದಿದ ವ್ಯಕ್ತಿ ಅಪರಾಧಿ: ಸುಪ್ರೀಂ ಕೋರ್ಟ್‌

Last Updated 24 ಮಾರ್ಚ್ 2023, 16:20 IST
ಅಕ್ಷರ ಗಾತ್ರ

ನವದೆಹಲಿ: ‘ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯು ಕಾನೂನಿನ ಪ್ರಕಾರ ಅಪರಾಧಿ. ಅಂತಹ ವ್ಯಕ್ತಿಯನ್ನು ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿ ವಿಚಾರಣೆಗೆ ಒಳಪಡಿಸಬಹುದು’ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠವು 2011ರಲ್ಲಿ ಹೊರಡಿಸಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಕೋರಿ ಕೇಂದ್ರ ಹಾಗೂ ಅಸ್ಸಾಂ ಸರ್ಕಾರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ, ಸಿ.ಟಿ.ರವಿಕುಮಾರ್‌ ಮತ್ತು ಸಂಜಯ್‌ ಕರೋಲ್‌ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ‘ನ್ಯಾಯಾಲಯದ ಹಿಂದಿನ ಆದೇಶವು ಕಾನೂನಿಗೆ ತಕ್ಕುದಾದುದ್ದಲ್ಲ’ ಎಂದು ಅಭಿಪ್ರಾಯಪಟ್ಟಿದೆ.

‘ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠದ ಆದೇಶದ ಅನುಸಾರವಾಗಿ ಹೈಕೋರ್ಟ್‌ಗಳು ನೀಡಿದ್ದ ತೀರ್ಪುಗಳು ಸಮಂಜಸವಾಗಿಲ್ಲ. ಹೀಗಾಗಿ ಅವುಗಳನ್ನು ರದ್ದುಪಡಿಸುತ್ತಿದ್ದೇವೆ’ ಎಂದು ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ.

‘ವ್ಯಕ್ತಿಯೊಬ್ಬ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಅಥವಾ ಜನರನ್ನು ಹಿಂಸೆಗೆ ಪ‍್ರಚೋದಿಸುತ್ತಿದ್ದರೆ ಮಾತ್ರ ಆತನನ್ನು ಅಪರಾಧಿ ಎಂದು ಪರಿಗಣಿಸಬಹುದು. ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ್ದಾನೆಂಬ ಕಾರಣಕ್ಕೆ ಆತನನ್ನು ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯವು 2011ರ ತೀರ್ಪಿನಲ್ಲಿ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT