ಸೋಮವಾರ, ಮಾರ್ಚ್ 20, 2023
24 °C

ವಾಟ್ಸ್‌ಆ್ಯಪ್‌ ನೀತಿ ಕುರಿತ ಅರ್ಜಿ ವಿಚಾರಣೆ: ನಿರ್ಧಾರ ಕೈಗೊಳ್ಳಲಿರುವ ಸುಪ್ರೀಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಳಕೆದಾರರ ದತ್ತಾಂಶವನ್ನು ಫೇಸ್‌ಬುಕ್‌ ಹಾಗೂ ಇತರರೊಂದಿಗೆ ಹಂಚಿಕೊಳ್ಳುವ ಕುರಿತ ವಾಟ್ಸ್‌ಆ್ಯಪ್‌ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕೊ ಅಥವಾ ಕೇಂದ್ರ ಸರ್ಕಾರವು ದತ್ತಾಂಶ ಭದ್ರತಾ ಮಸೂದೆ ಮಂಡಿಸುವವರೆಗೂ ಕಾಯಬೇಕೊ ಎಂಬುದರ ಕುರಿತು ತಾನು ನಿರ್ಧಾರ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ‘ಈ ಬಾರಿಯ ಸಂಸತ್‌ ಅಧಿವೇಶನದ ದ್ವಿತೀಯಾರ್ಧದಲ್ಲಿ ದತ್ತಾಂಶ ಭದ್ರತಾ ಮಸೂದೆ ಮಂಡಿಸುವ ಸಾಧ್ಯತೆ ಇದೆ’ ಎಂದು ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ಮಾಹಿತಿ ನೀಡಿದರು.

‘ಮಸೂದೆ ಮಂಡಿಸುವವರೆಗೆ ಕಾಯಲು ಯಾವುದೇ ತೊಂದರೆ ಇಲ್ಲ’ ಎಂದು ಹೇಳಿದ ನ್ಯಾಯಪೀಠವು ಬುಧವಾರ ಈ ಕುರಿತ ವಿಚಾರಣೆ ನಡೆಸುವುದಾಗಿ ತಿಳಿಸಿತು. 

ಓದಿ... ವ್ಯಭಿಚಾರ: ಅಧಿಕಾರಿ ವಿರುದ್ಧ ಸಶಸ್ತ್ರ ‍ಪಡೆಗಳು ಕ್ರಮ ಕೈಗೊಳ್ಳಬಹುದು ‘ಸುಪ್ರೀಂ’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು