ಮಂಗಳವಾರ, ಜನವರಿ 25, 2022
28 °C

ಪತ್ನಿ ಸಂಭಾಷಣೆ ರೆಕಾರ್ಡ್, ಖಾಸಗಿತನಕ್ಕೆ ಧಕ್ಕೆ?: ಪರಿಶೀಲಿಸಲು ಸುಪ್ರೀಂ ಸಮ್ಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪತ್ನಿಯ ದೂರವಾಣಿ ಸಂಭಾಷಣೆಯನ್ನು ಆಕೆಗೆ ತಿಳಿಯದೆ ರೆಕಾರ್ಡ್‌ ಮಾಡುವುದು ಆಕೆಯ ಖಾಸಗಿತನದ ಉಲ್ಲಂಘನೆಯೇ ಎಂಬ ವಿಷಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

2021 ಡಿಸೆಂಬರ್ 12 ರಂದು ಪಂಜಾಬ್‌ –ಹರಿಯಾಣ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿರುವ ಮೇಲ್ಮನವಿಯ ಆಧಾರದಲ್ಲಿ ನ್ಯಾಯಮೂರ್ತಿಗಳಾದ ವಿನೀತ್‌ ಸರಣ್‌ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು ನೋಟಿಸ್ ಜಾರಿ ಮಾಡಿದೆ.

ಬಟಿಂಡಾದ ಕೌಟುಂಬಿಕ ನ್ಯಾಯಾಲಯದ 2020ರ ಆದೇಶವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ಮಹಿಳೆಯ ವಿಚ್ಛೇದಿತ ಪತಿಗೆ, ಆತ ಹಾಗೂ ಮಹಿಳೆ ನಡುವಿನ ಧ್ವನಿಮುದ್ರಿತ ಸಂಭಾಷಣೆಗಳನ್ನೊಳಗೊಂಡ ಸಿಡಿಯನ್ನು ಹಾಜರುಪಡಿಸಲು ಬಟಿಂಡಾದ ಕೌಟುಂಬಿಕ ನ್ಯಾಯಾಲಯವು ಅನುಮತಿ ನೀಡಿತ್ತು.

‘ಪತ್ನಿಗೆ ತಿಳಿಯದಂತೆ ದೂರವಾಣಿ ಸಂಭಾಷಣೆಯನ್ನು ರೆಕಾರ್ಡ್‌ ಮಾಡುವುದು ಆಕೆಯ ಖಾಸಗಿತನದ ಸ್ಪಷ್ಟ ಉಲ್ಲಂಘನೆ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು.

ಮಹಿಳೆಯಿಂದ ವಿಚ್ಛೇದನ ಕೋರಿ ಪತಿ 2017ರಲ್ಲಿ ಅರ್ಜಿ ಸಲ್ಲಿಸಿದ್ದರು. 2009ರಲ್ಲಿ ಮದುವೆಯಾಗಿದ್ದ ಈ ದಂಪತಿಗೆ ಪುತ್ರಿ ಇದ್ದಾಳೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು