ಬುಧವಾರ, ಡಿಸೆಂಬರ್ 8, 2021
25 °C

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ; ‘ಸುಪ್ರೀಂ’ನಲ್ಲಿ ನಾಳೆ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್‌ 3ರಂದು ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂಕೋರ್ಟ್‌ ಬುಧವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ. ಈ ಘಟನೆಯಲ್ಲಿ ನಾಲ್ವರು ಕೃಷಿಕರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು.

ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ಹಿಮಾ ಕೊಹ್ಲಿ ಅವರಿದ್ದ ಪೀಠವು, ಎಂಟು ಜನರ ‘ಕ್ರೂರ’ ಕೊಲೆ ಕೃತ್ಯದ ಕುರಿತಂತೆ ಉತ್ತರಪ್ರದೇಶ ಸರ್ಕಾರ ಯಾವುದೇ ಕ್ರಮಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿತ್ತು. ಇದರ ವಿಚಾರಣೆ ನಡೆಸುವುದಾಗಿ ಅ.8ರಂದು ಹೇಳಿತ್ತು.

ಹಿಂಸಾಚಾರ ಘಟನೆಗೆ ಸಂಬಂಧಿಸಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಸೇರಿದಂತೆ ಇದುವರೆಗೂ ಎಂಟು ಜನರನ್ನು ಬಂಧಿಸಲಾಗಿದೆ. ಘಟನೆ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಇಬ್ಬರು ವಕೀಲರು ಪತ್ರ ಬರೆದಿದ್ದರು.

ಕೇಂದ್ರದ ನೂತನ ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದ ರೈತರು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ವಿರುದ್ಧ ಪ್ರತಿಭಟಿಸುವಾಗ ಅ.3ರಂದು ಅವರ ಮೇಲೆ ವಾಹನವನ್ನು ಹರಿಸಲಾಗಿದ್ದು, ನಾಲ್ವರು ರೈತರು ಮೃತಪಟ್ಟಿದ್ದರು. ಬಳಿಕ ಕೋಪೋದ್ರಿಕ್ತ ಪ್ರತಿಭಟನಕಾರರು ಹಲ್ಲೆ ನಡೆಸಿದ್ದು, ವಾಹನ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದರು. ಅಲ್ಲದೆ, ಸ್ಥಳೀಯ ಪತ್ರಕರ್ತ ಕೂಡಾ ಘಟನೆಯಲ್ಲಿ ಮೃತಪಟ್ಟಿದ್ದರು.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸರ್ವೋಚ್ಛ ನ್ಯಾಯಾಲಯವು ಈ ಕಾಯ್ದೆಗಳನ್ನು ಜಾರಿಗೊಳಿಸದಂತೆ ಇದೇ ವರ್ಷದ ಜನವರಿಯಲ್ಲಿ ತಡೆಯಾಜ್ಞೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು