ಪೆಗಾಸಸ್ ತನಿಖೆ ಕೋರಿ ಅರ್ಜಿ: ಮುಂದಿನ ವಾರ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಪೆಗಾಸಸ್ ಗೂಢಚರ್ಯೆ ಪ್ರಕರಣದ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹಿರಿಯ ಪತ್ರಕರ್ತರಾದ ಎನ್. ರಾಮ್, ಶಶಿ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.
ಹಿರಿಯ ಪತ್ರಕರ್ತರ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಮಾಡಿದ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ಮುಂದಿನ ವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಪೆಗಾಸಸ್ ಗೂಢಚರ್ಯೆ ಕುತಂತ್ರಾಂಶವನ್ನು ಬಳಸಿಕೊಂಡು, ಕೆಲವು ಸಂಸ್ಥೆಗಳು, ಇಲಾಖೆಗಳ ಮತ್ತು ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಇಸ್ರೆಲ್‌ನ ಎನ್‌ಎಸ್‌ಒನ ಪೆಗಾಸಸ್ ಗೂಢಚರ್ಯೆ ಕುತಂತ್ರಾಂಶ ಬಳಸಿ 300ಕ್ಕೂ ಹೆಚ್ಚು ಭಾರತೀಯರ ದೂರವಾಣಿ ಸಂಖ್ಯೆಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವೊಂದು ವರದಿ ಮಾಡಿತ್ತು.
ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್ಡಿಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.