ಸೋಮವಾರ, ಏಪ್ರಿಲ್ 12, 2021
32 °C
ರಕ್ಷಣೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ

ಮುಖ್ತಾರ್ ಅನ್ಸಾರಿ ಪ್ರಕರಣ: ಏ.9ಕ್ಕೆ ಅನ್ಸಾರಿ ಪತ್ನಿಯ ಅರ್ಜಿ ವಿಚಾರಣೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ‌: ಪಾತಕಿ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಯವರಿಗೆ ರಕ್ಷಣೆ ನೀಡಲು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಅನ್ಸಾರಿ ಪತ್ನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಸುಪ್ರೀಂ ಕೋರ್ಟ್‌ನ ಜಾಲತಾಣದ ಮಾಹಿತಿ ಪ್ರಕಾರ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಸುಭಾಷ್‌ರೆಡ್ಡಿ ಅವರನ್ನೊಳಗೊಂಡ ಪೀಠ ಏಪ್ರಿಲ್ 9 ರಂದು ಅನ್ಸಾರಿಯವರಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಲಿದೆ.

ಅನ್ಸಾರಿ ವಿರುದ್ಧ ಉತ್ತರ ಪ್ರದೇಶದ ವಿವಿಧೆಡೆ ಸುಲಿಗೆ ಸೇರಿದಂತೆ ಘೋರ ಅಪರಾಧ ಪ್ರಕರಣಗಳು ದಾಖಲಾಗಿವೆ.

ಉತ್ತರಪ್ರದೇಶದಲ್ಲಿ ಅನ್ಸಾರಿ ಅವರ ಜೀವಕ್ಕೆ ‘ನಿಜವಾದ, ನಿರಂತರ ಮತ್ತು ಗಂಭೀರ ಬೆದರಿಕೆ‘ ಇದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಾಲಯ ಅವರ ಜೀವಕ್ಕೆ ರಕ್ಷಣೆ ನೀಡಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸದಿದ್ದರೆ, ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ಹಿಂದೆ ಉತ್ತರ ಪ್ರದೇಶ ಸರ್ಕಾರದಲ್ಲಿರುವ ಪ್ರತಿಸ್ಪರ್ಧಿ ಪಕ್ಷಗಳ ರಾಜಕೀಯ ಶತ್ರುಗಳು ಅನ್ಸಾರಿ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು