ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಅರ್ಜಿ: ಜ.17ರಂದು ‘ಸುಪ್ರೀಂ‘ನಲ್ಲಿ ವಿಚಾರಣೆ

ನವದೆಹಲಿ: ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿರುವುದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 17ರಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಪ್ರಕರಣದ ಸಂಪೂರ್ಣ ವಿವರ ನೀಡುವಂತೆ ಕಕ್ಷಿದಾರರಿಗೆ ಸೂಚಿಸಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಒಂದು ವಾರದೊಳಗೆ ಸಲ್ಲಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನಿರ್ದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸಾಯಿಬಾಬಾ ಅವರನ್ನು2014ರಲ್ಲಿ ಬಂಧಿಸಲಾಗಿತ್ತು. ಅಕ್ಟೋಬರ್ 14ರಂದು ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.