ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಣೆ: ಸೋಮವಾರ ‘ಸುಪ್ರೀಂ’ ವಿಚಾರಣೆ

Last Updated 4 ಸೆಪ್ಟೆಂಬರ್ 2022, 11:20 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರಾವಧಿಯನ್ನು ಐದು ವರ್ಷಕ್ಕೆ ವಿಸ್ತರಣೆ ಮಾಡಿರುವುದು ಮತ್ತು ಇದಕ್ಕಾಗಿ ಕಾನೂನಿಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.

ರಣದೀಪ್ ಸಿಂಗ್ ಸುರ್ಜೇವಾಲ, ಮಹುವಾ ಮೊಯಿತ್ರಾ ಸೇರಿದಂತೆ ಎಂಟು ಮಂದಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್‌ ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಅಪಲೋಡ್‌ ಮಾಡಲಾಗಿದೆ. ಅರ್ಜಿಗಳ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಜಾಗೃತ ಆಯೋಗಕ್ಕೆ (ಸಿವಿಸಿ) ಆಗಸ್ಟ್‌ 2ರಂದು ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT