ಗುರುವಾರ , ಜನವರಿ 20, 2022
15 °C

ರಾಕೇಶ್‌ ಆಸ್ತಾನ ನೇಮಕಾತಿ ವಿಚಾರ: ನ.26 ರಂದು ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗುಜರಾತ್‌ ಕೇಡರ್‌ನ ಐಪಿಎಸ್‌ ಅಧಿಕಾರಿ ರಾಕೇಶ್‌ ಆಸ್ತಾನಾ ಅವರನ್ನು ದೆಹಲಿ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಿರುವುದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಗುರುವಾರ ತೀರ್ಮಾನಿಸಿದೆ.

ಅಧಿಕಾರಿಯ ನಿವೃತ್ತಿಗೂ ಮೂರು ದಿನಗಳ ಮೊದಲು ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನವೆಂಬರ್‌ 26 (ಶುಕ್ರವಾರ) ರಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಪೀಠ ವಿಚಾರಣೆಗೆ ಪರಿಗಣಿಸಿದೆ. 

1984ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಆಸ್ತಾನಾ ಅವರನ್ನು ಜುಲೈ 31 ರಂದು ಅವರ ನಿವೃತ್ತಿಗೂ ಮುನ್ನ ದೆಹಲಿ ಪೊಲೀಸ್‌ ಆಯುಕ್ತರಾಗಿ ಜುಲೈ 27 ರಂದು ನೀಡಿದ್ದ ನೇಮಕಾತಿ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಅಕ್ಟೋಬರ್‌ 12 ರಂದು ವಜಾಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು