ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪಾದಕನ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಅಸ್ತು

ರಾಹುಲ್‌ ಗಾಂಧಿ ಕುರಿತು ತಿರುಚಿದ ವಿಡಿಯೊ ಪ್ರಸಾರ ಪ್ರಕರಣ
Last Updated 14 ಜುಲೈ 2022, 14:47 IST
ಅಕ್ಷರ ಗಾತ್ರ

ನವದೆಹಲಿ:ರಾಹುಲ್‌ ಗಾಂಧಿಯವರ ಹೇಳಿಕೆ ತಿರುಚಿದ ವಿಡಿಯೊ ಪ್ರಸಾರ ಮಾಡಿದ ಆರೋಪದ ಪ್ರಕರಣದಲ್ಲಿ ತಮಗೆ ನೋಟಿಸ್‌ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಟಿ.ವಿ ವಾಹಿನಿಯ ಸಂಪಾದಕ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಹಾಗೂ ಹಿಮಾ ಕೊಯ್ಲಿ ಅವರಿದ್ದ ಪೀಠವು, ‘ಸಂಪಾದಕನಿಗೆ ಟಿ.ವಿ ವಾಹಿನಿಯು ರಕ್ಷಣೆ ನೀಡುತ್ತಿಲ್ಲ. ಹಾಗಾಗಿ ತಕ್ಷಣವೇ ಈ ಅರ್ಜಿಯ ವಿಚಾರಣೆ ನಡೆಸಬೇಕು’ ಎಂದು ಸಂಪಾದಕನ ಪರ ಹಿರಿಯ ವಕೀಲ ಸಿದ್ಧಾರ್ಥ ದವೆ ಸಲ್ಲಿಸಿದ ಕೋರಿಕೆಯನ್ನು ಗುರುವಾರ ಮಾನ್ಯ ಮಾಡಿತು.

ಇದೇ ಪ್ರಕರಣದಲ್ಲಿ ಸುದ್ದಿ ನಿರೂಪಕ ರೋಹಿತ್‌ ರಂಜನ್‌ ಅವರಿಗೆ ಮಧ್ಯಂತರ ರಕ್ಷಣೆ ಸಿಕ್ಕಿದೆ ಎನ್ನುವುದನ್ನು ದವೆ ಅವರು ಪೀಠದ ಗಮನಕ್ಕೆ ತಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT