ಸೋಮವಾರ, ಸೆಪ್ಟೆಂಬರ್ 26, 2022
24 °C

ಗಲಭೆಕೋರರ ಆಸ್ತಿ ನೆಲಸಮ ವಿರುದ್ಧದ ಅರ್ಜಿ: ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗಲಭೆ ಪ್ರಕರಣಗಳಲ್ಲಿ ಭಾಗಿಯಾದ ಆಪಾದಿತ ಆರೋಪಿಗಳ ಆಸ್ತಿಗಳನ್ನು ಮತ್ತಷ್ಟು ನೆಲಸಮಗೊಳಿಸದಂತೆ ವಿವಿಧ ರಾಜ್ಯಗಳಿಗೆ ನಿರ್ದೇಶನ ನೀಡಲು ಕೋರಿ ಜಮಿಯತ್ ಉಲೆಮಾ-ಐ-ಹಿಂದ್ ಮುಸ್ಲಿಂ ಸಂಘಟನೆ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಪಿ.ಎಸ್‌. ನರಸಿಂಹ ಅವರಿದ್ದ ಪೀಠವು, ಸಿಪಿಐಎಂ ಬೃಂದಾ ಕಾರಟ್‌ ಸೇರಿ ಇತರ ಐವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿವಿಧ ರಾಜ್ಯಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವ ಸರ್ಕಾರಗಳ ಕ್ರಮಕ್ಕೆ ಸಂಬಂಧಿಸಿ ಯಾವುದೇ ಮಧ್ಯಂತರ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಜುಲೈ 13ರಂದು ನಿರಾಕರಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು