ಮಂಗಳವಾರ, ಜನವರಿ 31, 2023
19 °C

ಜನಪ್ರತಿನಿಧಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ: ಇಂದು ’ಸುಪ್ರೀಂ’ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾರ್ವಜನಿಕ ಬದುಕಿನಲ್ಲಿರುವ ಜನಪ್ರತಿನಿಧಿಗಳ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲೆ ಹೆಚ್ಚಿನ ನಿರ್ಬಂಧ ವಿಧಿಸಬಹುದೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ.

ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣಿಯನ್‌, ಬಿ.ವಿ. ನಾಗರತ್ನ ಅವರಿರುವ ಪೀಠವು, ಈ ನಿಟ್ಟಿನಲ್ಲಿ ಕೆಲವು ಸಾಮಾನ್ಯ ಮಾರ್ಗಸೂಚಿಗಳನ್ನು ರೂಪಿಸಬಹುದೇ ಎಂದು ತಿಳಿಸಲಿದೆ.   

ಬುಲಂದರ್‌ಶಹರ್‌ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂತ್ರಸ್ತರ ಬಗ್ಗೆ ಉತ್ತರಪ್ರದೇಶ ಸರ್ಕಾರದ ಆಗಿನ ಸಚಿವ ಆಜಂಖಾನ್ ನೀಡಿದ ಹೇಳಿಕೆಗೆ ಸಂಬಂಧಿಸಿದ ಪ್ರಕರಣವಿದು. ಈ ಪ್ರಕರಣದಲ್ಲಿ ಆಜಂಖಾನ್‌ ಅವರು ಕ್ಷಮೆಯಾಚಿಸಿದ್ದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು