ನೋಟು ಅಮಾನ್ಯೀಕರಣ: ಜನವರಿ 2ಕ್ಕೆ ‘ಸುಪ್ರೀಂ’ ತೀರ್ಪು

ನವದೆಹಲಿ: ₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಜನವರಿ 2 ರಂದು ತೀರ್ಪು ಪ್ರಕಟಿಸಲಿದೆ.
ಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎಸ್.ಎ.ನಜೀರ್ ಅವರು ಜನವರಿ 4ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ ನಿಗದಿತ ದಿನದಂತೆ ತೀರ್ಪು ಪ್ರಕಟವಾಗುವ ನಿರೀಕ್ಷೆ ಇದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್ ಮತ್ತು ಬಿ.ವಿ.ನಾಗರತ್ನ ಅವರೂ ಈ ಪೀಠದಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.