ಗುರುವಾರ , ಜನವರಿ 28, 2021
16 °C
ಲೋಕಸಭಾ ಚುನಾವಣೆ: ಪ್ರಧಾನಿ ವಿರುದ್ಧ ಕಣಕ್ಕಿಳಿಯುವ ವೇಳೆ ನಾಮಪತ್ರ ತಿರಸ್ಕೃತಗೊಂಡ ಪ್ರಕರಣ

ಮಾಜಿ ಯೋಧ ತೇಜ್‌ಬಹದ್ದೂರ್ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಿದ ಚುನಾವಣಾ ಸಮಿತಿಯ ಕ್ರಮವನ್ನು ಪ್ರಶ್ನಿಸಿ ಮಾಜಿ ಯೋಧ ತೇಜ್‌ಬಹದ್ದೂರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾ ಮಾಡಿತು.

ಮುಖ್ಯ ನಾಯಮೂರ್ತಿ ಎಸ್‌.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್‌.ಬೊಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ನ.18ರಂದು ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ್ದು, ಈ ಹಿಂದೆ ತೇಜ್ ಬಹಾದ್ದೂರ್ ಅರ್ಜಿ ವಜಾಗೊಳಿಸಿದ್ದ  ಅಲಹಾಬಾದ್ ಹೈಕೋರ್ಟ್‌ನ ಕ್ರಮವನ್ನು ಎತ್ತಿಹಿಡಿಯಿತು.

ಬಿಎಸ್ಎಫ್‌ನಿಂದ 2017ರಲ್ಲಿ ವಜಾಗೊಂಡಿದ್ದ ತೇಜ್‌ ಬಹದ್ದೂರ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಳೆದ ವರ್ಷದ ಮೇ 1ರಂದು ನಾಮಪತ್ರ ಸಲ್ಲಿಸಿದ್ದರು. ಬಹಾದ್ದೂರ್ ಪರ ವಕೀಲರು, ತಮ್ಮ ಕಕ್ಷಿದಾರರರು ಮೊದಲು ಪಕ್ಷೇತರನಾಗಿ, ನಂತರ ಎಸ್‌.ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು ಎಂದು ಪ್ರತಿಪಾದಿಸಿದ್ದರು.

ಅರ್ಜಿಯಲ್ಲಿ ತೇಜ್ ಬಹದ್ದೂರ್ ಅವರು, ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿಗಳ ಕ್ರಮವನ್ನು ರದ್ದುಪಡಿಸಬೇಕು ಹಾಗೂ ತಮ್ಮ ಪ್ರತಿವಾದಿ (ನರೇಂದ್ರ ಮೋದಿ) ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿದ್ದರು.

ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಇವರು ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯವು ಕಳೆದ ವರ್ಷದ ಮೇ ತಿಂಗಳಲ್ಲಿಯೇ ತಿರಸ್ಕರಿಸಿದ್ದು, ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಯಾವುದೇ ಸಕಾರಣವಿಲ್ಲ ಎಂದು ತಿಳಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು