ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿಗಳಿಬ್ಬರು ನ್ಯಾಯಾಂಗ ಬಂಧನಕ್ಕೆ

Last Updated 4 ಮಾರ್ಚ್ 2022, 12:55 IST
ಅಕ್ಷರ ಗಾತ್ರ

ಮುಜಾಫರ್‌ನಗರ: 8 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಖಾಸಗಿ ಶಾಲೆಯೊಂದರ ಮ್ಯಾನೇಜರ್ ಮತ್ತು ಶಿಕ್ಷಕರೊಬ್ಬರನ್ನು ಬಂಧಿಸಿ, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್‌ನಗರದ ಕೋತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ.

ಶಾಲೆಯಿಂದ ಮನೆಗೆ ತೆರಳಿದ ಬಾಲಕಿ, ಘಟನೆಯನ್ನು ಪೋಷಕರಿಗೆ ವಿವರಿಸಿದ್ದಾಳೆ.

ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಬಳಿಕ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕುಲದೀಪ್ ಸಿಂಗ್ ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವರದಿಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT