ಮಂಗಳವಾರ, ಫೆಬ್ರವರಿ 7, 2023
27 °C

ಕೇರಳ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ– ಶಿಕ್ಷಕ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಇಲ್ಲಿನ ಪ್ರೌಢಶಾಲೆಯೊಂದರ 15 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿರಣ್‌ ಕರುಣಾಕರನ್‌ (43) ಎಂಬ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.

‘ಅಲ್ಲದೇ, ಶಿಕ್ಷಕನ ವಿರುದ್ಧ ನೀಡಿದ ದೂರನ್ನು ಹಿಂಪಡೆದುಕೊಳ್ಳಲು ಮನವೊಲಿಸಿದ ಹಾಗೂ ಆರೋಪಿಯು ಊರಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಪ್ರೌಢಶಾಲೆಯ ಪ್ರಾಂಶು‍ಪಾಲ ಹಾಗೂ ಇತರ ಇಬ್ಬರು ಶಿಕ್ಷಕರನನ್ನೂ ಬಂಧಿಸಲಾಗಿದೆ’ ಎಂದೂ ಅವರು ತಿಳಿಸಿದರು.

‘ಪ್ರೌಢಶಾಲೆಯ ಅತಿಥಿ ಶಿಕ್ಷಕನಾಗಿದ್ದ ಕಿರಣನನ್ನು ತಮಿಳುನಾಡಿದ ನಾಗರಕೋಯಿಲ್‌ನಲ್ಲಿ ಬಂಧಿಸಲಾಗಿದೆ. ನಾಲ್ಕೂ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆಯ ವಿವಿಧ ನಿಬಂಧನೆಗಳಡಿ ಪ್ರಕರಣ ದಾಖಲಿಸಲಾಗಿದೆ’ ಎಂದರು.

ಈ ಘಟನೆಯು ನವೆಂಬರ್‌ 16ರಂದು ನಡೆದಿದೆ. ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಆರೋಪಿಯು ವಿದ್ಯಾರ್ಥಿನಿಯನ್ನು ಆಕೆಯ ಮನೆಗೆ ಬಿಡುವುದಾಗಿ ಹೇಳಿ ತನ್ನ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಮಾರ್ಗಮಧ್ಯೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ವಿದ್ಯಾರ್ಥಿನಿಯು ತನ್ನ ಸ್ನೇಹಿತೆಯರಿಗೆ ಈ ವಿಷಯ ತಿಳಿಸಿದಾಗ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು