ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಮತ್ತು ಚಾರಣದಂಥ ಚಟುವಟಿಕೆಗಳನ್ನು ಮಂಗಳವಾರದವರೆಗೆ ನಿಷೇಧಿಸಲಾಗಿದೆ.

ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತಗಳು ಈ ಆದೇಶ ಹೊರಡಿಸಿವೆ. ಅದರಂತೆ 13 ಜಿಲ್ಲೆಗಳಲ್ಲಿಯ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳು ತೆರೆದಿರುವುದಿಲ್ಲ.

ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿಂದಾಗಿ 'ರೆಡ್ ಅಲರ್ಟ್' ಘೋಷಣೆಯಾಗಿದೆ ಹಾಗೂ ಮಂಗಳವಾರಕ್ಕೆ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಲಿದ್ದು, ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದೆ.

ಇದನ್ನೂ ಓದಿ:ಪ್ರವಾಹ –ಭೂಕುಸಿತ: ಮೃತರ ಸಂಖ್ಯೆ 22ಕ್ಕೆ ಏರಿಕೆ

ಅ.19ರ ವರೆಗೆ ಚಮೋಲಿ ಜಿಲ್ಲೆಯ ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಗೋಪೇಶ್ವರದ ಸಂಪೂರ್ಣ ಅರಣ್ಯ ಪ್ರದೇಶದಲ್ಲಿ ಚಾರಣ, ಪರ್ವಾತಾರೋಹಣದಂಥ ಚಟುವಟಿಕೆಯನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಡೆಹ್ರಾಡೂನ್‌ನಲ್ಲಿ ಇದೇ 18, 19ರಂದು ನಡೆಯಬೇಕಿದ್ದ ಜಿಲ್ಲಾಮಟ್ಟದ ಖೇಲ್ ಮಹಾಕುಂಭವನ್ನು ಅ.24 ಮತ್ತು 25ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.