ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೆಚ್ಚುಗೆ

Last Updated 7 ನವೆಂಬರ್ 2020, 12:08 IST
ಅಕ್ಷರ ಗಾತ್ರ

ನವದೆಹಲಿ: ಪಿಎಸ್‌ಎಲ್‌ವಿ–ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಾಗೂ ಈ ಯೋಜನೆಯಲ್ಲಿ ಭಾಗಿಯಾದ ಎಲ್ಲ ವಿಜ್ಞಾನಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಪಿಎಸ್‌ಎಲ್‌ವಿಸಿ49/ಇಒಎಸ್‌–01 ಮಿಶನ್‌ನ ಯಶಸ್ವಿ ಉಡಾವಣೆ ಸಲುವಾಗಿ ಇಸ್ರೋ ಹಾಗೂ ಭಾರತೀಯ ಬಾಹ್ಯಾಕಾಶ ವಲಯವನ್ನು ನಾನು ಅಭಿನಂದಿಸುತ್ತೇನೆ. ಕೋವಿಡ್‌–19 ಸಂದರ್ಭದಲ್ಲಿ ನಮ್ಮ ವಿಜ್ಞಾನಿಗಳು ಗಡುವನ್ನು ತಲುಪಲು ಅನೇಕ ಸವಾಲುಗಳನ್ನು ಜಯಿಸಿದ್ದಾರೆ’ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

‘ಅಮೆರಿಕ ಹಾಗೂ ಲುಕ್ಸಂಬರ್ಗ್‌ನ ತಲಾ ನಾಲ್ಕು ಮತ್ತು ಲುಥುವೇನಿಯಾದ 1 ಸೇರಿ ಒಟ್ಟು 9 ಉಪಗ್ರಹಗಳನ್ನೂ ಉಡಾವಣೆ ಮಾಡಲಾಗಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪಿಎಸ್‌ಎಲ್‌ವಿ–ಸಿ49, ಭಾರತದ ಭೂ ವಿಕ್ಷಣಾ ಉಪಗ್ರಹ ಇಒಎಸ್‌–01 ಹಾಗೂ ಇತರ 9 ಉಪಗ್ರಹಗಳನ್ನು ಹೊತ್ತು ಸಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ 3.12ರ ವೇಳೆಗೆ ಉಪಗ್ರಹ ಉಡಾವಣೆ ಮಾಡಲಾಯಿತು. ಇದು ಇಸ್ರೋ ಈ ವರ್ಷ ಕೈಗೊಂಡ ಮೊದಲ ಯೋಜನೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT