ನವದೆಹಲಿ: ‘ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಮನೆ ಮತ್ತು ಅರಮನೆಯನ್ನು ಕಳೆದುಕೊಳ್ಳುವ ಭೀತಿಯಿಂದಾಗಿ ಆರ್‌ಎಸ್‌ಎಸ್– ಬಿಜೆಪಿ ಸೇರಿದರು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಪಕ್ಷದ 3000ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್ ಮಾತನಾಡಿದರು.
ಪಕ್ಷದಲ್ಲಿ ತಮ್ಮ ಒಂದು ಕಾಲದ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರನ್ನು ಉಲ್ಲೇಖಿಸಿದ ರಾಹುಲ್, ಮಧ್ಯಪ್ರದೇಶದಲ್ಲಿ ಕಳೆದ ವರ್ಷ ಕಾಂಗ್ರೆಸ್ ತೊರೆದು ಸಿಂಧಿಯಾ ಬಿಜೆಪಿ ಸೇರಿದರು. ಈಗ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರು. ಆರ್‌ಎಸ್‌ಎಸ್ ಭಯವಿರುವವರು ಪಕ್ಷ ತ್ಯಜಿಸಲು ಸ್ವತಂತ್ರರಿದ್ದಾರೆ. ಹಾಗೆಯೇ ಸಂಘಪರಿವಾರದ ವಿರುದ್ಧ ಧೈರ್ಯವಾಗಿ ಹೋರಾಡುವ ಹೊರಗಿನ ನಿರ್ಭೀತ ನಾಯಕರನ್ನು ಪಕ್ಷ ಸೇರಿಸಿಕೊಳ್ಳಲಿದೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.