ಕೇರಳ: ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ, ಎಸ್ಡಿಪಿಐ ಕಾರ್ಯಕರ್ತನ ಬಂಧನ

ಪಾಲಕ್ಕಾಡ್: ಆರ್ಎಸ್ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಚೆರುಪುಳಶ್ಶೇರಿಯಿಂದ ಎಸ್ಡಿಪಿಐ ಕಾರ್ಯಕರ್ತನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
‘ಬಂಧಿತ ಆರೋಪಿಯು ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ವಿಶ್ವನಾಥ್ ತಿಳಿಸಿದ್ದಾರೆ. ಆರೋಪಿಯ ಗುರುತನ್ನು ತನಿಖಾ ತಂಡ ಬಹಿರಂಗಪಡಿಸಿಲ್ಲ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.