ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಾಸ್ತ್ರ ಕಳ್ಳಸಾಗಣೆ: ಜಮ್ಮು–ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ

Last Updated 31 ಡಿಸೆಂಬರ್ 2022, 12:34 IST
ಅಕ್ಷರ ಗಾತ್ರ

ಸಾಂಬಾ/ಜಮ್ಮು: ಜಮ್ಮು–ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿರುವ ಹಲವು ಹಳ್ಳಿಗಳಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಶನಿವಾರಶೋಧ ಕಾರ್ಯಾಚರಣೆ ನಡೆಸಿದವು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸುರಂಗ ಮಾರ್ಗಗಳಪತ್ತೆ ಮಾಡಲು ಮತ್ತು ಸಾರ್ವಜನಿಕರಲ್ಲಿ ಮಾದಕ ವಸ್ತು, ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡುವ ಡ್ರೋನ್‌ಗಳ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು’ ಎಂದು ಉಪ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಆರ್‌.ಭಾರದ್ವಾಜ್‌ ತಿಳಿಸಿದರು.

ಶನಿವಾರ ಬೆಳಿಗ್ಗೆಯಿಂದ ಚೆಕ್‌ ಧುರ್ಮಾ ಗ್ರಾಮದಿಂದ ಆರಂಭಿಸಿಮಂಗುಚೆಕ್‌, ಸಾಡೆಚೆಕ್‌, ರೆಗಾಲ್‌ ಮತ್ತು ಚೆಹ್ವಾಲ್‌ ಸೇರಿ ಅನೇಕ ಗ್ರಾಮಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.ದೇಶ ವಿರೋಧಿ ಕೃತ್ಯಗಳ ತಡೆಗೆ ಆಗಾಗ ಇಂಥ ಕಾರ್ಯಾಚರಣೆಗಳನ್ನು ಕೈಗೊಳ್ಳಬೇಕೆಂಬ ಸೂಚನೆ ಇದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT