ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂತ್ರಿಕ ಕಾರಣ: ಸಿಯುಇಟಿ–ಯುಜಿ ಪರೀಕ್ಷೆ ರದ್ದು

Last Updated 4 ಆಗಸ್ಟ್ 2022, 16:09 IST
ಅಕ್ಷರ ಗಾತ್ರ

ನವದೆಹಲಿ: ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಗುರುವಾರ ಮಧ್ಯಾಹ್ನ ನಿಗದಿಯಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಯುಇಟಿ– ಯುಜಿ) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಾಂತ್ರಿಕ ಕಾರಣಗಳಿಂದ ರದ್ದುಗೊಳಿಸಿತು.

ಅದೇ ರೀತಿ ಗುರುವಾರ ಬೆಳಿಗ್ಗೆ ನಿಗದಿಯಾಗಿದ್ದ ಪರೀಕ್ಷೆಯನ್ನು ದೇಶದ 17 ರಾಜ್ಯಗಳ ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಬೇಕಾಯಿತು ಎಂದು ಎನ್‌ಟಿಎ ತಿಳಿಸಿದೆ. ಮುಂದೂಡಲಾಗಿರುವ ಈ ಪರೀಕ್ಷೆಯನ್ನು 17 ರಾಜ್ಯಗಳ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಇದೇ 12ರಂದು ನಡೆಸಲಾಗುವುದು ಎಂದು ಎನ್‌ಟಿಎ ಹಿರಿಯ ನಿರ್ದೇಶಕರಾದ ಸಾಧನಾ ಪರಾಶರ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ 3ರಿಂದ 6ರವರೆಗೆ ನಡೆಯಬೇಕಿದ್ದ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳು ತಾಂತ್ರಿಕ ಕಾರಣಗಳಿಂದಾಗಿ ಅಪ್‌ಲೋಡ್‌ ಆಗಿದ್ದೇ ಸಂಜೆ 5 ಗಂಟೆಗೆ. ಆ ಪ್ರಶ್ನೆ ಪತ್ರಿಕೆಗಳನ್ನು ದೇಶದ 489 ಕೇಂದ್ರಗಳು ಡೌನ್‌ಲೋಡ್‌ ಮಾಡಿಕೊಳ್ಳಲು ಆರಂಭಿಸಿದಾಗ ಸಂಜೆ 5.25 ಗಂಟೆಯಾಗಿತ್ತು. ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ವಿಳಂಬವಾಗಿದ್ದರಿಂದ ರದ್ದುಗೊಳಿಸಲಾಯಿತು. ಈ ಪರೀಕ್ಷೆಯನ್ನು ಇದೇ 12ರಿಂದ 14ರ ನಡುವೆ ನಡೆಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಇದೇ 12 ಮತ್ತು 14ರಂದು ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ ತೊಂದರೆಯಿದ್ದರೆ ತಮ್ಮ ಹೆಸರು ಮತ್ತು ನೋಂದಣಿ ಸಂಖ್ಯೆಯೊಂದಿಗೆ datechange@nta.ac.inಗೆ ಮೇಲ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ. ಎನ್‌ಟಿಎ ದೇಶದ 259 ನಗರಗಳ 489 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 15ರಿಂದ ಸಿಯುಇಟಿ ನಡೆಸುತ್ತಿದ್ದು, ಆಗಸ್ಟ್‌ 20ರವರೆಗೆ ಪರೀಕ್ಷೆಗಳು ನಿಗದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT