ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿನ್ ರಾವತ್ ದೆಹಲಿ ನಿವಾಸಕ್ಕೆ ಭದ್ರತೆ ಹೆಚ್ಚಳ

Last Updated 9 ಡಿಸೆಂಬರ್ 2021, 8:36 IST
ಅಕ್ಷರ ಗಾತ್ರ

ನವದೆಹಲಿ: ಹೆಲಿಕಾಪ್ಟರ್ ಅವಘಡದಲ್ಲಿ ಮೃತಪಟ್ಟ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ದೆಹಲಿಯ ಕಾಮರಾಜ್ ಮಾರ್ಗದಲ್ಲಿರುವ ಅವರ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ತಮಿಳುನಾಡಿನ ನೀಲಗೀರಿ ಜಿಲ್ಲೆಯ ಕೊನೂರುಬಳಿ ಗುರುವಾರಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು 11 ಜನ ಸೇನಾ ಸಿಬ್ಬಂದಿ ಮೃತಪಟ್ಟಿದ್ದರು.

ಮನೆಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಯ್ದ ಕೆಲವರನ್ನು ಮಾತ್ರ ಮನೆ ಒಳಗಡೆ ಬಿಡಲಾಗುತ್ತಿದೆ.

ಬಿಪಿನ್ ರಾವತ್ ದಂಪತಿ ತಮ್ಮ ಇಬ್ಬರು ಹೆಣ್ಣು ಮಕ್ಕಳಾದ ಕೃತಿಕಾ ರಾವತ್ ಹಾಗೂ ತರಿಣಿ ರಾವತ್ ಅವರನ್ನು ಅಗಲಿದ್ದಾರೆ.

ನಿನ್ನೆ ಸಂಜೆರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹಾಗೂ ಜನರಲ್ ಮುಕುಂದ್ ನರವಾಣೆ ರಾವತ್ ಅವರ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಸಾಂತ್ವಾನ ಹೇಳಿದ್ದರು.

ನವದೆಹಲಿಯಲ್ಲಿ ಸಂಪೂರ್ಣ ಸೇನಾ ಗೌರವದೊಂದಿಗೆ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ರಾಜ್‌ನಾಥ್ ಸಿಂಗ್ ಅವರು ತಿಳಿಸಿದ್ದು, ಇಂದು ಸಂಜೆ ಮೃತರ ಪಾರ್ಥಿವ ಶರೀರ ಅಲ್ಲಿಗೆ ತಲುಪಬಹುದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT