ಜಾರ್ಖಂಡ್: 18 ಸುಧಾರಿತ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಸಿಬ್ಬಂದಿ

ಚಾಯ್ಬಾಸಾ : ಜಾರ್ಖಂಡ್ನ ಸಿಂಗ್ಭೂಮ್ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಭದ್ರತಾ ಸಿಬ್ಬಂದಿಯು 18 ಸುಧಾರಿತ ಸ್ಫೋಟಕಗಳನ್ನು (ಐಇಡಿ) ಪತ್ತೆ ಮಾಡಿ, ಅವುಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಮಾವೊವಾದಿ ಉಗ್ರರು ಈ ಕೃತ್ಯವನ್ನು ಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಕೇಂದ್ರೀಯ ಮೀಸಲು ಪಡೆ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸುವ ವೇಳೆ ಸಿಂಗ್ಭೂಮ್ ಜಿಲ್ಲೆಯ ಅರಣ್ಯ ವಲಯದಲ್ಲಿ ಈ ಸುಧಾರಿತ ಸ್ಫೋಟಕಗಳನ್ನು ಪತ್ತೆ ಮಾಡಿ, ನಿಷ್ಕ್ರಿಯಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡೇ ಈ ಕೃತ್ಯ ಎಸಗಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಬಾಂಬ್ ನಿಷ್ಕ್ರಿಯದಳದವರು ಸ್ಫೋಟಕಗಳು ಪತ್ತೆಯಾದ ಸ್ಥಳಕ್ಕೆ ಧಾವಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.