ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಪಠಣ್‌ಕೋಟ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಟ್ಟೆಚ್ಚರ

Last Updated 19 ಜನವರಿ 2022, 16:46 IST
ಅಕ್ಷರ ಗಾತ್ರ

ಜಮ್ಮು: ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಯ ಮುನ್ನಚ್ಚರಿಕೆ ಹಾಗೂ ಶಂಕಾಸ್ಪದ ಚಲನವಲನದ ಮೇಲೆ ನಿಗಾವಹಿಸಲು ಇಲ್ಲಿನ ಪಠಣ್‌ಕೋಟ್ -ಜಮ್ಮು ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

‘ಹಿಮಾಚಲ ಪ್ರದೇಶ-ಪಂಜಾಬ್ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ ಗಡಿ ಭದ್ರತಾ ಪಡೆ(ಬಿಎಸ್ ಎಫ್)ಯನ್ನು ನಿಯೋಜಿಸಲಾಗಿದೆ. ಹೆದ್ದಾರಿಯುದ್ಧಕ್ಕೂ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ರಾಷ್ಟ್ರವಿರೋಧಿ ಚಟುವಟಿಕೆ ಹಾಗೂ ಒಳ ನುಸುಳುವಿಕೆಯ ಪ್ರದೇಶಗಳಲ್ಲಿ ಬಿಗಿಭದ್ರತೆಯನ್ನು ತೀವ್ರಗೊಳಿಸಲಾಗಿದೆ. ರಾಷ್ಟ್ರ ವಿರೋಧಿ ಕೃತ್ಯಗಳನ್ನು ತಡೆಯುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಅವಳಿ ಗಡಿ ಜಿಲ್ಲೆಗಳಾದ ಕತುವಾ ಮತ್ತು ಸಾಂಬಾ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹೆದ್ದಾರಿಯುದ್ಧಕ್ಕೂ ಅನುಮಾನಸ್ಪಾದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಗಸ್ತು ಹೆಚ್ಚಿಸಲಾಗಿದೆ. ಜಮ್ಮುವಿನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT