ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು– ಕಾಶ್ಮೀರ: ಎನ್‌ಕೌಂಟರ್‌ ಸ್ಥಳದಲ್ಲಿ ಮತ್ತೊಬ್ಬ ಉಗ್ರನ ಶವ ಪತ್ತೆ

Last Updated 12 ನವೆಂಬರ್ 2021, 6:08 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್‌ಗಂ ಜಿಲ್ಲೆಯಲ್ಲಿ ಕಾರ್ಯಾಚರಣೆ ವೇಳೆ ನಡೆಸಿದ್ದ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದ ಉಗ್ರನೊಬ್ಬನ ಶವವನ್ನು ಭದ್ರತಾ ಪಡೆಗಳು ಶುಕ್ರವಾರ ಗುರುತಿಸಿವೆ. ಇದರೊಂದಿಗೆ ಹತರಾದ ಉಗ್ರರ ಸಂಖ್ಯೆ ಎರಡಕ್ಕೇರಿದೆ.

ಕುಲ್‌ಗಂ ಪ್ರದೇಶದಲ್ಲಿ ಗುರುವಾರ ಎನ್‌ಕೌಂಟರ್‌ ಆರಂಭವಾಗಿತ್ತು.ಉಗ್ರರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಶುಕ್ರವಾರ ಬೆಳಿಗ್ಗೆ ಉಗ್ರನೊಬ್ಬನ ಶವ ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಕಾವಲು ಬೇಲಿ ನಿರ್ಮಿಸಿ ಶೋಧ ಮುಂದುವರಿಸಿವೆ. ಕಾರ್ಯಾಚರಣೆಯ ಸ್ಥಳದಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡುಗಳು ಒಳಗೊಂಡಂತೆ ಹೆಚ್ಚಿನ ಪ್ರಮಾಣದಲ್ಲಿ ವಿವಿಧ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT