ಬಾಂಬ್ ಬೆದರಿಕೆ: ತಿರುಚಿರಾಪಳ್ಳಿ, ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ

ತಿರುಚಿರಾಪಳ್ಳಿ (ತಮಿಳುನಾಡು): ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅಧಿಕಾರಿಗಳಿಗೆ ಸೋಮವಾರ ಬೆದರಿಕೆ ಕರೆಬಂದಿದೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಭದ್ರತಾ ಸಿಬ್ಬಂದಿಯು ತಿರುಚಿರಾಪಳ್ಳಿ ಮತ್ತು ಚೆನ್ನೈನ ವಿಮಾನ ನಿಲ್ದಾಣಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು ಎಂದು ಪೊಲೀಸರು ತಿಳಿಸಿದರು.
‘ವಿಮಾನ ನಿಲ್ದಾಣದಿಂದ 200 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಗೊಳಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಶ್ವಾನ ಮತ್ತು ಲೋಹ ಪರಿಶೋಧಕ ಯಂತ್ರಗಳ ಸಹಾಯದಿಂದ ಸಿಐಎಸ್ಎಫ್ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ’ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.