ಬುಧವಾರ, ಸೆಪ್ಟೆಂಬರ್ 29, 2021
20 °C

ವಿವಾದಿತ ಹೇಳಿಕೆ: ಸಾಹಿತಿ ಜಾವೇದ್‌ ಅಖ್ತರ್‌ ನಿವಾಸಕ್ಕೆ ಬಿಗಿ ಬಂದೋಬಸ್ತ್‌

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ಮುಂಬೈನ ಜುಹು ಪ್ರದೇಶದಲ್ಲಿ ಇಸ್ಕಾನ್‌ ದೇವಸ್ಥಾನದ ಬಳಿಯಿರುವ ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ಅವರ ನಿವಾಸದ ಮುಂದೆ ಭದ್ರತೆಯನ್ನು ಹೆಚ್ಚಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಆರ್‌ಎಸ್‌ಎಸ್‌ ಅನ್ನು ತಾಲಿಬಾನ್‌ಗೆ ಹೋಲಿಸಿದಕ್ಕೆ ಜಾವೇದ್‌ ಅಖ್ತರ್‌ ಕ್ಷಮೆಯಾಚಿಸಬೇಕು ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಂ ಕದಂ ಅವರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ಅಖ್ತರ್‌ ನಿವಾಸದ ಮುಂದೆ ಮಹಿಳಾ ಕಾನ್‌ಸ್ಟೇಬಲ್‌ಗಳು ಸೇರಿದಂತೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

'ತಾಲಿಬಾನಿಗಳು ಇಸ್ಲಾಮಿಕ್‌ ದೇಶವನ್ನು ಬಯಸಿದಂತೆ ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ’ ಎಂದು ಆರ್‌ಎಸ್‌ಎಸ್‌ ಹೆಸರನ್ನು ಉಲ್ಲೇಖಿಸದೆ ಸುದ್ದಿ ಸಂಸ್ಥೆಯೊಂದಕ್ಕೆ ಜಾವೇದ್‌ ಅಖ್ತರ್‌ ಹೇಳಿಕೆ ನೀಡಿದ್ದರು.

‘ಜಾವೇದ್‌ ಅಖ್ತರ್ ಕ್ಷಮೆ ಕೋರುವವರೆಗೆ ಅವರು ಭಾಗಿಯಾಗಿರುವ ಯಾವುದೇ ಚಲನಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಮಹಾರಾಷ್ಟ್ರದ ಬಿಜೆಪಿ ವಕ್ತಾರ, ಶಾಸಕ ರಾಂ ಕದಂ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು