ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು ಸೋಮವಾರ ಬಾಂಬೆ ಹೈಕೋರ್ಟ್ ಜನವರಿ 25ವರೆಗೆ ವಿಸ್ತರಿಸಿದೆ.

ಅಲ್ಲದೆ ಈ ಅವಧಿಯಲ್ಲಿ ವಿಚಾರಣೆಗಾಗಿ ಎಂದು ಅವರಿಗೆ ಸಮನ್ಸ್ ನೀಡದಂತೆಯೂ ನಗರ ಪೊಲೀಸರಿಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮುಂಬೈ ಪೊಲೀಸರು ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುದ್ಧ ದೇಶದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದ ಕಂಗನಾಗೆ ಹೈಕೋರ್ಟ್ ಬಂಧನದಿಂದ ರಕ್ಷಣೆ ನೀಡಿತ್ತು.

ಜನವರಿ 8 ರಂದು ರನೌತ್ ಮತ್ತು ಅವರ ಸಹೋದರಿ ಮುಂಬೈನ ಬಾಂದ್ರಾ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಮತ್ತು ಕೋಮು ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಎಂಬ ಆರೋಪದಡಿ ಎಫ್‌ಐಆರ್ ದಾಖಲಿಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆದೇಶ ಹೊರಡಿಸಿತ್ತು.

ಈ ಎಫ್‌ಐಆರ್‌ನ್ನು ರದ್ದುಗೊಳಿಸುವಂತೆ ಕೋರಿ ಕಂಗನಾ ಮತ್ತು ಅವರ ಸಹೋದರಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಸ್.ಎಸ್ ಶಿಂಧೆ, ಮನೀಶ್ ಪಿತಾಲೆ ಅವರ ವಿಭಾಗೀಯ ಪೀಠವು ಅರ್ಜಿ ವಿಚಾರಣೆಯನ್ನು ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.