ವಿಶ್ವಬ್ಯಾಂಕ್ ಕಾರ್ಯಕಾರಿ ನಿರ್ದೇಶಕರಾಗಿ ರಾಜೇಶ್ ಖುಲ್ಲರ್

ನವದೆಹಲಿ: ವಾಷಿಂಗ್ಟನ್‌ನಲ್ಲಿ ಇರುವ ವಿಶ್ವ ಬ್ಯಾಂಕ್‌ನ ಕಾರ್ಯಕಾರಿ ನಿರ್ದೇಶಕರಾಗಿ (ಇ.ಡಿ) ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಖುಲ್ಲರ್ ಅವರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಪ್ರಸ್ತುತ, ಹರಿಯಾಣಾದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಪ್ರಧಾನ ಕಾರ್ಯದರ್ಶಿಯಾಗಿರುವ ಖುಲ್ಲರ್ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಹರಿಯಾಣ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧ ನಿಗಮದ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯದಡಿ ಇರುವ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿಗೂ ಖುಲ್ಲರ್ ಸೇವೆ ಸಲ್ಲಿಸಿದ್ದರು. ವಿಶ್ವಬ್ಯಾಂಕ್‌ನಲ್ಲಿ ಅವರ ಸೇವಾವಧಿ ಮೂರು ವರ್ಷಗಳಿಗೆ ನಿಗದಿಪಡಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.