ಮಂಗಳವಾರ, ಜನವರಿ 19, 2021
21 °C

ವಿಧಾನಸಭೆ ಚುನಾವಣೆ| ತ.ನಾಡು, ಪುದುಚೇರಿಗೆ ನಾಳೆ ಚುನಾವಣಾ ಆಯೋಗದ ಅಧಿಕಾರಿಗಳ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2021 ರ ಮಧ್ಯೆದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಚುನಾವಣಾ ಆಯೋಗವು ಹಿರಿಯ ಅಧಿಕಾರಿಗಳನ್ನು ತಮಿಳುನಾಡು ಮತ್ತು ಪುದುಚೇರಿಗೆ ಸೋಮವಾರ ಕಳುಹಿಸಲಿದೆ.

ಚುನಾವಣಾ ಆಯೋಗದ ಪ್ರಧಾನ ಕಾರ್ಯದರ್ಶಿ ಉಮೇಶ್‌ ಸಿನ್ಹಾ ಅವರು ಸೋಮವಾರ ಮತ್ತು ಮಂಗಳವಾರ ತಮಿಳುನಾಡಿನಲ್ಲಿ ಇರಲಿದ್ದಾರೆ. ಬುಧವಾರ ಪುದುಚೇರಿಗೆ ತೆರಳಲಿದ್ದಾರೆ. ಈ ವೇಳೆ ಅವರು ಚುನಾವಣಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಕಳೆದ ವಾರ ಉಪ ಚುನಾವಣಾ ಆಯುಕ್ತ ಸುದೀಪ್ ಜೈನ್ ಅವರು ಇದೇ ರೀತಿ ಚುನಾವಣಾ ಸಿದ್ಧತೆಗಳನ್ನು ನೋಡಿಕೊಳ್ಳಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು.

ಮುಂದಿನ ವರ್ಷ ಏಪ್ರಿಲ್‌ ಮತ್ತು ಜೂನ್‌ ತಿಂಗಳಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು