ಮಂಗಳವಾರ, ಅಕ್ಟೋಬರ್ 27, 2020
19 °C

ಹಿರಿಯ ಕಾಂಗ್ರೆಸ್‌ ನಾಯಕ ಥಾಮಸ್ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಟ್ಟಯಂ: ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ, ಚೆಂಗನಶ್ಶೇರಿ ಕ್ಷೇತ್ರದ ಶಾಸಕ ಸಿ.ಎಫ್‌.ಥಾಮಸ್‌ ಭಾನುವಾರ ನಿಧನರಾದರು. 81 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ತಿರುವಳ್ಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

1980ರಿಂದ ಚೆಂಗನಶ್ಶೇರಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಅವರು, ನಂತರ ನಡೆದ ಚುನಾವಣೆಗಳಲ್ಲಿ ಸತತವಾಗಿ ಗೆಲುವು ದಾಖಲಿಸಿದ್ದರು. 2001ರಿಂದ 2006 ರವರೆಗೆ ಅಧಿಕಾರದಲ್ಲಿದ್ದ ಯುಡಿಎಫ್‌ ಸರ್ಕಾರದಲ್ಲಿ ಥಾಮಸ್‌ ಅವರು ಗ್ರಾಮೀಣಾಭಿವೃದ್ಧಿ, ಖಾದಿ ಮತ್ತು ಗ್ರಾಮೋದ್ಯೋಗ ಸಚಿವರಾಗಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು