ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಆರ್‌‍ಪಿ ಹಗರಣ: ರಿಪಬ್ಲಿಕ್‌ ಟಿವಿ ಪ್ರಸರಣ ವಿಭಾಗದ ಮುಖ್ಯಸ್ಥ ಬಂಧನ

Last Updated 10 ನವೆಂಬರ್ 2020, 11:03 IST
ಅಕ್ಷರ ಗಾತ್ರ

ಮುಂಬೈ: ಟಿಆರ್‌ಪಿ (ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್‌) ಹಗರಣದಡಿ ರಿಪಬ್ಲಿಕ್‌ ಟಿವಿಯ ಪ್ರಸರಣ ವಿಭಾಗದ ಮುಖ್ಯಸ್ಥ ಘನಶ್ಯಾಮ್‌ ಸಿಂಗ್‌ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಮುಂಬೈ ಅಪರಾಧಿ ವಿಭಾಗದ ಅಧಿಕಾರಿಗಳು ತಿಳಿಸಿದರು.

ಘನಶ್ಯಾಮ್‌ ಸಿಂಗ್‌ ಅವರು ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷರು ಕೂಡ ಆಗಿದ್ದಾರೆ. ಇವರನ್ನು ಮಂಗಳವಾರ ಬೆಳಿಗ್ಗೆ 7.40 ರ ಸುಮಾರಿಗೆ ಅವರ ನಿವಾಸದಿಂದ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದರು.

ಈ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ಘನಶ್ಯಾಮ್‌ ಸಿಂಗ್‌ ಸೇರಿ ಒಟ್ಟು 12 ಜನರನ್ನು ಬಂಧಿಸಿದಂತಾಗಿದೆ.

ಕೆಲ ಚಾನೆಲ್‌ಗಳು ಟಿಆರ್‌ಪಿಯಲ್ಲಿ ವಂಚನೆ ನಡೆಸಿವೆ ಎಂದು ಆರೋಪಿಸಿ ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್ ಇಂಡಿಯಾವು( ಬಾರ್ಕ್‌) ಹನ್ಸಾ ರಿಸರ್ಚ್‌ ಗ್ರೂಪ್‌ ಮೂಲಕ ಪ್ರಕರಣ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT